Friday, July 1, 2022

Latest Posts

ಕೊರೊನಾ ಆತಂಕ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆತಂಕ ಹಿನ್ನಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಸೋಮವಾರ ಮುಖ್ಯಮಂತ್ರಿಗಳ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ನಲ್ಲಿ ನಳಿನ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಂಮತ್ರಿಗಳು ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ,ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು. ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾಧಿಕಾರಿ ಸಭೆ ನಡೆಸಲಿದ್ದು, ನಿರ್ಧಾರ ಕೈಗೊಳ್ಳಲಿದ್ದಾರೆ.
ಜನಪ್ರತಿನಿಧಿಗಳು,ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನವಾಗುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss