Wednesday, July 6, 2022

Latest Posts

ಕೊರೋನಾಗೆ ಅಮೆರಿಕದಲ್ಲಿ ಒಂದೇ ದಿನ 2600 ಮಂದಿ ಸಾವು

ವಾಷಿಂಗ್ಟನ್: ಮಹಾಮಾರಿ ಕೊರೋನಾ ವೈರಸ್ ಅಮೆರಿಕವನ್ನೇ ಸಾವಿನ ಮನೆಯಂತೆ ಮಾಡಿಬಿಟ್ಟಿದೆ. ಅಮೆರಿಕದಲ್ಲಿ ಒಂದೇ ದಿನ 2600 ಮಂದಿ ಬಲಿಯಾಗಿದ್ದಾರೆ. ವಿಶ್ವದಲ್ಲೇ ಅತೀ ಹೆಚ್ಚು ಪ್ರಕಣಗಳಿರುವ ದೇಶವಾಗಿದೆ.

ಕಳೆದ 24 ಗಂಟೆಗಳಲ್ಲಿ 2600 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷ 50 ಸಾವಿರದ ಗಡಿ ದಾಟಲಿದೆ.

ಈ ಕುರಿತು ಮಾತನಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೇಶದಲ್ಲಿ ಕೊರೋನಾಗೆ ತುತ್ತಾಗಿ ಸಾವಿರಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಸೋಂಕಿತರ ಸಂಖ್ಯೆಯು ದಿನೇ ದಿನೇ ಹೆಚ್ಚಾಗುತ್ತಿದ್ದು, ವಿಶ್ವದಲ್ಲಿ ಅತಿ ಹೆಚ್ಚಿನ ಸೋಂಕು ತಗುಲಿರುವ ರಾಷ್ಟ್ರವಾಗಿದೆ. ಈ ಕುರಿತು ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಹಾಗೂ ಈ ಕುರಿತು ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ.

ವಿಶ್ವದಾದ್ಯಂತ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 2.5 ಮಿಲಿಯನ್ ಆಗಿದ್ದು, 1ಲಕ್ಷ 30ಸಾವಿರ ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 12 ಸಾವಿರದ ಗಡಿ ದಾಟಲಿದ್ದು, 392 ಮಂದಿ ಸಾವನ್ನಪ್ಪಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss