ತುಮಕೂರು: ಕೊರೋನಾ ಸೋಂಕಿಗೆ ಇಂದು ಮತ್ತೊಂದು ಬಲಿ. ಇದೀಗ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ.
ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ವ್ಯಕ್ತಿ ಸಾವು. ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಕೊರೋನಾ ಶಂಕಿತರು ದಾಖಲಾಗಿದ್ದು, ನೆನ್ನೆ ವೈದ್ಯರು ಶಂಕಿತರ ಗಂಟಲ ದ್ರವವನ್ನು ಕೊರೋನಾ ಪರೀಕ್ಷೆಗೆ ಕಳುಹಿಸಿದ್ದರು. ಇಂದು ಅವರ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು, ಅವರಿಬ್ಬರಲ್ಲಿ ಒಬ್ಬರಿಗೆ ಸೋಂಕು ಇರುವುದು ಖಚಿತವಾಗಿದೆ.
ಮಾ.5 ರಂದು ದೆಹಲಿಗೆ ಪ್ರಯಾಣ ಮಾಡಿದ್ದ ವ್ಯಕ್ತಿಗೆ ಮಾ.18ರಂದು ಜ್ವರ ಕಾಣಿಸಿಕೊಂಡಿದೆ, ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ ಬಳಿಕ ಬಸ್ ನಲ್ಲಿ ಪ್ರಯಾಣ ಮಾಡಿದ್ದ ನೆಂದು ತಿಳಿದಿದೆ. ಬಸ್ ನಲ್ಲಿ ಪ್ರಯಾಣ ಮಾಡಿದ 13 ಮಂದಿಯನ್ನು ಮತ್ತು ದೆಹಲಿ ಪ್ರಯಾಣದಲ್ಲಿದ್ದ ಸಹ ಪ್ರಯಾಣಿಕರನ್ನು ಪತ್ತೆಹಚ್ಚುವ ಕೆಲಸದಲ್ಲಿ ಜಿಲ್ಲಾಡಳಿತ ನಿರತವಾಗಿದೆ.