ಮೈಸೂರು: ಮಹಾಮಾರಿ ಕೊರೋನಾಗೆ ಮುಖ್ಯ ಪೊಲೀಸ್ ಪೇದೆ ಹಾಗೂ ನ್ಯಾಯಾಲಯದ ಸಿಬ್ಬಂದಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಠಾಣೆಯ ಮುಖ್ಯಪೇದೆ ಸುರೇಶ್(೪೬) ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಛಾಯಾಪುತ್ರ ಮೃತಪಟ್ಟವರು.
ಚಾಮರಾಜನಗರ ಜಿಲ್ಲೆಯ ಕಿಲಗೆರೆ ನಿವಾಸಿಯಾದ ಸುರೇಶ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆ.೧೪ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರಿಗೆ ಪತ್ನಿ, ಒಬ್ಬ ಮಗ ಹಾಗೂ ಮಗಳು ಇದ್ದಾರೆ. ಇನ್ನು ಕೊರೋನಾ ಸೋಂಕಿಗೀಡಾಗಿದ್ದ ಛಾಯಾಪತ್ರರು
ಮೈಸೂರಿನ ಕೊರೋನಾ ಸೆಂಟರ್ ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ.