ಕೊರೋನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಯುವಕ : ವರದಿ ಮಾತ್ರ ನೆಗೆಟಿವ್

0
149

ಬೀದರ್: ತನಗೆ ಕೊರೋನಾವೈರಸ್ ಸೋಂಕು ತಗುಲಿದೆ ಎಂದು ಭಯಗೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೀದರ್ ನ ಬಸವ ಕಲ್ಯಾಣದ ತ್ರಿಪುರಾಂತ್ ಎಂಬಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಅಶ್ವಿನ್ ಮೆಟ್ರೆ (26) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈತನನ್ನು ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೊರೋನಾ ಟೆಸ್ಟ್ ವರದಿ ಬರುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಮಹಾರಾಷ್ಟ್ರದ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಬಂದಿದ್ದ ಅದರಂತೆ, ಅವನಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ಆದರೆ ಕೋರೋನ ಪರೀಕ್ಷೆಯ ವರದಿ ಬಂದಿದ್ದು, ನೆಗೆಟಿವ್ ಎಂದು ಹೇಳಲಾಗಿದೆ. ಕರೋನ ಬಂದರೆ ಮುಂದೆ ಹೇಗೆ ಎಂದು ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here