ಬೆಂಗಳೂರು: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವವರಲ್ಲಿ ಅನುದಾನ ರಹಿತ ಹಾಗೂ ಖಾಸಗಿ ಶಿಕ್ಷಕರೂ ಸೇರಿದ್ದಾರೆ. ಆರ್ಥಿಕ ಸಂಕಷ್ಟದಿಂದ ಬೇರೆ ಕೆಲಸಗಳನ್ನು ಅವರು ಮಾಡುತ್ತಿದ್ದಾರೆ. ಇದು ಮನಸಿಗೆ ಬೇಸರ ತಂದಿದ್ದು, ಅವರಿಗೆ ಸಹಾಯ ಮಾಡುವ ಚಿಂತನೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಸಂಕಷ್ಟದಲ್ಲಿರುವ ಶಿಕ್ಷಕರ ಅಂಕಿಅಂಶಗಳನ್ನು ಕಲೆಹಾಕಲಾಗುತ್ತಿದ್ದು, ಶೀಘ್ರವೇ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಲಾಗುತ್ತದೆ ಎಂದು ಹೇಳಿದರು.
ಶಾಲೆ ಆರಂಭದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಶಿಕ್ಷಕರ ಕಷ್ಟಗಳನ್ನು ಆಲಿಸಲು ಶಿಕ್ಷಕರ ಸಹಾಯವಾಣಿ ತೆರೆಯಲಾಗಿದೆ, ವಾಟ್ಸಾಪ್ ಮೂಲಕವೂ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ ಎಂದು ಹೇಳಿದರು.