Tuesday, July 5, 2022

Latest Posts

ಕೊರೋನಾದಿಂದ ಗುಣಮುಖರಾಗಿ ಆಸ್ರತ್ರೆಯಿಂದ ಬಿಡುಗಡೆಗೊಂಡ ಪಿಸಿಗೆ ಸನ್ಮಾನ

ಮಂಡ್ಯ : ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೆÇಲೀಸ್ ಪೇದೆಯೊಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಡಿವೈಎಸ್ಪಿ ಹಾಗೂ ಇತರೆ ಪೆÇಲೀಸ್ ಅಧಿಕಾರಿಗಳು ಆಸ್ಪತ್ರೆಯಿಂದ ಬರಮಾಡಿಕೊಂಡರು.

ನಗರದ ಸೆಂಟ್ರಲ್ ಪೆÇಲೀಸ್ ಠಾಣೆಯಲ್ಲಿ ಪೆÇಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೂವಯ್ಯ ಬಿರಾದಾರ್ ಎಂಬುವರೇ ಆಸ್ಪತ್ರೆಯಿಂದ ಬಿಡುಗಡೆಗೊಂಡವರಾಗಿದ್ದು, ಅವರನ್ನು ಡಿವೈಎಸ್ಪಿ ನವೀನ್‍ಕುಮಾರ್ ಮತ್ತು ಇತರೆ ಅಧಿಕಾರಿಗಳು ಸನ್ಮಾನಿಸಿ ಬರಮಾಡಿಕೊಂಡರು.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆಯೊಬ್ಬರ ಸಂಪರ್ಕದಿಂದ ಹೂವಯ್ಯ ಬಿರಾದಾರ್ ಅವರಿಗೆ ಸೋಂಕು ತಗುಲಿತ್ತು. ಬಳಿಕ ಅವರ ಮನೆಯನ್ನು ಸೀಲ್‍ಡೌನ್ ಮಾಡಿ ಸುತ್ತಮುತ್ತಲ ಪ್ರದೇಶಕ್ಕೆ ರಾಸಾಯನಿಕ ಸಿಂಪಡಿಸಲಾಗಿತ್ತು. ಕಳೆದ ಹತ್ತು ದಿನಗಳಿಂದ ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಗಂಟಲ ದ್ರವ ಪರೀಕ್ಷೆ ನಡೆಸಿದಾಗ ಗುಣವಾಗಿರುವುದು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಗಿತ್ತು.

ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಿ, ಕೊರೋನಾ ರೋಗಿಗಳ ಸೇವಾ ಕಾರ್ಯದಲ್ಲಿ ತೊಡಗಿದ್ದ ಆಸ್ಪತ್ರೆಯ ಸ್ವಚ್ಚತಾ ಕಾರ್ಯಕರ್ತರು, ಸಿಬ್ಬಂದಿಗಳನ್ನೂ ಸಹ ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ್, ಪ್ರಾಂಶುಪಾಲ ಡಾ. ಕೆ.ಎಂ. ಶಿವಕುಮಾರ್, ಶರತ್, ಪಿಎಸ್‍ಐಗಳಾದ ಧೀಕ್ಷಿತ್, ಶರತ್‍ಕುಮಾರ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss