ಬೆಂಗಳೂರು: ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಾಮುಲು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದರು. ಈಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಶ್ರೀರಾಮುಲು ಆತ್ಮೀಯರೆ, ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುತ್ತೇನೆ.
ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಆತ್ಮೀಯರೆ,
ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುತ್ತೇನೆ.
ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳು.1/2 pic.twitter.com/CcIN6mvDlr— B Sriramulu (@sriramulubjp) August 26, 2020