ಮಂಡ್ಯ: ಕೋವಿಡ್-19 ನಂತರದ ದಿನಗಳಲ್ಲಿ ಕೊರೋನಾದೊಂದಿಗೆ ಜೀವನ ಮಾಡುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಭಿಪ್ರಾಯಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಕರ್ತರಿಗೆ ಆಯುವೇದ ಔಷಧಗಳನ್ನು ವಿತರಿಸಿ ಮಾತನಾಡಿದ ಅವರು, ಕೊರೋನಾ ರೋಗದಿಂದ ಯಾರೂ ಮಾನಸಿಕ ಖಿನ್ನತೆಗೆ ಒಳಗಾಗಬಾರದು. ಅದನ್ನು ಧೈರ್ಯದಿಂದ ಎದುರಿಸುಂತಹ ಗುಣ ಬೆಳೆಸಿಕೊಳ್ಳಬೇಕು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ಕೊರೋನಾ ತಡೆಗೆ ಸಹಕಾರ ನೀಡಬೇಕು. ಆಕಸ್ಮಿಕವಾಗಿ ಬಂದರೂ ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದರು.
ಆಯುರ್ವೇದದಲ್ಲಿ ನೈಸರ್ಗಿಕವಾಗಿ ಬೆಳದ ಗಿಡಗಳು, ಫಲ-ಪುಷ್ಪಗಳಿಂದ ತಯಾರಿಸಿದ ಔಷಧವನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಚವನಪ್ರಾಶ್ ಎಂಬ ಔಷಧ 15 ಔಷಧೀಯ ಗಿಡಮೂಲಿಕೆಗಳಿಂದ ತಯಾರಿಸಲಾಗಿದೆ. ಹರಿಶಿನ, ಶುಂಠಿ, ಕಾಳುಮೆಣಿನಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಇರುತ್ತದೆ. ಜನಸಾಮಾನ್ಯರು ಈ ವಸ್ತುಗಳನ್ನು ಹೆಚ್ಚಾಗಿ ಸೇವಿಸುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಅಗತ್ಯತೆ ಇದೆ ಎಂದರು.