ಹೊಸದಿಲ್ಲಿ: ದೇಶದಲ್ಲಿ ಮಹಾಮಾರಿ ಕೊರೋನಾಗೆ CRPF ನ ಒಬ್ಬ ಯೋಧ ಬಲಿಯಾಗಿದ್ದಾರೆ.
ಕೊರೋನಾಗೆ ಬಲಿಯಾದ 55 ವರ್ಷದ ಯೋಧನಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನಲೆ ಚಿಕಿತ್ಸೆಗಾಗಿ ಏ.17 ರಂದು ಅವರನ್ನು ಸಫ್ದರ್ಜುಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯೋಧ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಗಾಗಲೇ 46ಯೋಧರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.