Tuesday, June 28, 2022

Latest Posts

ರಾಜ್ಯದಲ್ಲಿ 124ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ: ಮೋದಿ ಜೊತೆ ಬಿ.ಎಸ್.ವೈ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಕೊರೋನಾ ಸೋಂಕಿನಿಂದ ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ದೇಶದ ಎಲ್ಲಾ ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿ ಮೋದಿ ರಾಜ್ಯದಲ್ಲಿನ ಕೊರೋನಾ ಸೋಂಕಿನ ಪರಿಸ್ಥಿತಿ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ನಾವು ಯಾವ ರೀತಿಯಲ್ಲಿ ಇರುತ್ತೀವಿ ಅನ್ನುವುದರ ಆಧಾರದ ಮೇಲೆ ಲಾಕ್ ಡೌನ್ ಕುರಿತಾಗಿ ನಿರ್ಧಾನ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ಹೇಳಿದರು.

ಲಾಕ್ ಡೌನ್ ನಿಂದ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಆಗಬಾರದು, ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ. ಲಾಕ್ ಡೌನ್ ನಿಯಮಗಳನ್ನು ಪಾಳಿಸಿದ ರಾಜ್ಯಗಳಗೆ ಶ್ಲಾಘಿನೆ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಜಾರಿಗೆ ತರುವಂತೆ ತಿಳಿಸಿದ್ದು, ಕೊರೋನಾ ಸೋಮಕಿತರ ಪತ್ತೆ, ಐಸೊಲೇಷನ್ ವಿಚಾರಗಳು ಶೀಘ್ರವಾಗಿ ನಡೆಯಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss