Wednesday, August 17, 2022

Latest Posts

ಕೊರೋನಾ ಕುರಿತ ಶೀಘ್ರ ನಿರ್ಧಾರಕ್ಕೆ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ

ಬೆಂಗಳೂರು :ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ, ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ, ಮಾತನಾಡಿ,ಕೋವಿಡ್ ಗೆ ಸಂಬಂಧಿಸಿದಂತೆ ಸರ್ಕಾರ ಬಳಸುತ್ತಿರುವ ಎಲ್ಲ ಆಯಪ್, ತಂತ್ರಜ್ಞಾನಗಳನ್ನು ಒಟ್ಟು ಮಾಡಿ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸುವುದರಿಂದ ಕೋವಿಡ್ ರೋಗಿಯು ಎಲ್ಲಿ ದಾಖಲಾಗಬೇಕು ಅಥವಾ ಯಾವ ರೀತಿಯ ಚಿಕಿತ್ಸೆಗೆ ಒಳಪಡಬೇಕು ಎಂಬುದನ್ನು ತಕ್ಷಣ ತೀರ್ಮಾನಿಸಬಹುದು. ಇದರಿಂದಾಗಿ ಚಿಕಿತ್ಸೆ ಪಡೆಯುವಲ್ಲಿನ ಗೊಂದಲ ನಿವಾರಣೆಯಾಗಲಿದೆ ಎಂದು ಸಚಿವರು ಸಭೆಗೆ ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!