Monday, August 8, 2022

Latest Posts

ಕೊರೋನಾ ಗುಣಮುಖ ರೋಗಿಗಳ ಬಿಡುಗಡೆಯಲ್ಲಿ ವಿಜಯಪುರ ಜಿಲ್ಲೆ ಪ್ರಥಮ: ಡಿಸಿ

ವಿಜಯಪುರ: ಎಲ್ಲೆಡೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ವಿಷಮ ಪರಿಸ್ಥಿತಿಯಲ್ಲೂ ಗುಣಮುಖ ರೋಗಿಗಳ ಬಿಡುಗಡೆಗೊಳಿಸುವಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾವಾರು ಒಟ್ಟು ಕೋವಿಡ್ ಪಾಸಿಟಿವ್ ಹೊಂದಿದ ರೋಗಿಗಳು ಗುಣಮುಖರಾದವರಲ್ಲಿ ವಿಜಯಪುರ ಜಿಲ್ಲೆಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆ ಹೊಂದಿದ್ದು, ಆರೋಗ್ಯ ಇಲಾಖೆಯ ವ್ಯವಸ್ಥಿತ ಸಹಾಕಾರ ಹಾಗೂ ಚಿಕಿತ್ಸೆಗಳಿಂದಾಗಿ ಇಂದು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಗುಣಮುಖರಾಗಿ ಮನೆಗೆ ತೆರಳುತ್ತಿದ್ದಾರೆ ಎಂದರು.
ಜಿಲ್ಲೆಯು ಬೆಂಗಳೂರು ನಂತರ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಹೋಮ್ ಐಸೋಲೇಶನ್ ಮಾಡಿರುವ ಜಿಲ್ಲೆಯಾಗಿದೆ. ಹೋಮ್ ಐಸೋಲೇಷನ್ ಹೆಚ್ಚಿನ ಸಂಖ್ಯೆಯಲ್ಲಿ ಮಾಡುವುದರಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದಾಗಿದೆ. ಈ ದೆಸೆಯಲ್ಲಿ ಹೆಚ್ಚ್ಚಿನ ರೋಗಿಗಳನ್ನು ನುರಿತ ತಜ್ಞ ವೈದ್ಯರಿಂದ ಚಿಕಿತ್ಸೆಗೆ ಒಳಪಡಿಸಿ ಗುಣಮುಖಗೊಳಿಸುವಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಆರ್‌ಟಿಪಿಸಿಆರ್ ಲ್ಯಾಬ್‌ಗಳನ್ನು ಈಗಾಗಲೆ ನಗರದ ಜಿಲ್ಲಾಸ್ಪತ್ರೆ ಮತ್ತು ಬಿಎಲ್‌ಡಿಇ ಆಸ್ಪತ್ರೆಗಳಲ್ಲಿ ಪ್ರಾರಂಭವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಎರಡು ಶಿಪ್ಟ್ದಲ್ಲಿ ಕೋವಿಡ್ ಗಂಟಲು ದ್ರವ ಮಾದರಿ ಪರೀಕ್ಷೆ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ 3 ಶಿಪ್ಟಗಳಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ರೋಗಿಗಳನ್ನು ಗುರುತಿಸಲು ಸಾಧ್ಯವಾಗಲಿದೆ. ಮೂರನೇ ಶಿಪ್ಟ್ನಲ್ಲಿ ಕಾರ್ಯ ನಿರ್ವಹಿಸಲು ಕೊರತೆಯಿರುವ ಲ್ಯಾಬ್ ಟೆಕ್ನಿಶಿಯನ್‌ಗಳ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆರ್‌ಟಿಪಿಸಿಆರ್ ಲ್ಯಾಬ್‌ನಲ್ಲಿ ಈಗಾಗಲೆ ಒಂದು ಶಿಪ್ಟ್ನಲ್ಲಿ ಸುಮಾರು 90 ರಷ್ಟು ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತಿದ್ದ್ದು, ಸದ್ಯ ಜಿಲ್ಲೆಯಲ್ಲಿ ಪ್ರತಿದಿನ 150 ರಿಂದ 180 ರ ವರೆಗೆ ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಲ್ಯಾಬ್‌ನಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss