ಕೊರೋನಾ ವೈರಸ್ ಮಹಾಮಾರಿ ಹಬ್ಬುತ್ತಲೇ ಇದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತಲೇ ಇದೆ. ಇದ್ದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಲಾಕ್ ಡೌನ್ ಸಡಿಲಿಕೆಯಾಗಿದ್ದು, ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಸುಮಾರು ಎರಡೂವರೆ ತಿಂಗಳಿಂದ ಮನೆಯಲ್ಲಿಯೆ ಕುಳಿತಿದ್ದ ಜನ ಈಗ ನಿಧಾನವಾಗಿ ಹೊರಬರುತ್ತಿದ್ದು, ಕೆಲಸಗಳಲ್ಲಿ ನಿರತರಾಗುತ್ತಿದ್ದಾರೆ. ಅಷ್ಟೇ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಸಿಕ್ಕಿದೆ. ಈಗಾಗಲೆ ಸಾಕಷ್ಟು ಮಂದಿ ಚಿತ್ರೀಕರಣಕ್ಕೆ ಮರಳಿದ್ದಾರೆ. ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಸಹ ಲಾಕ್ ಡೌನ್ ನಂತರ ಚಿತ್ರೀಕರಣಕ್ಕೆ ಮರಳಿದ್ದಾರೆ. ಕೊರೊನಾ ಆತಂಕದ ನಡುವೆಯೂ ಚಿತ್ರೀಕರಣ ಮಾಡುತ್ತಿದ್ದಾರೆ. ಸ್ಯಾಂಡಲ್ ವುಡ್ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಚಿತ್ರೀಕರಣಕ್ಕಾಗಿ ರಚಿತಾ ರಾಮ್ ಹೈದರಾಬಾದ್ ಗೆ ತೆರಳಿದ್ದಾರೆ. ರಚಿತಾ ರಾಮ್ ತೆಲುಗಿನ ‘ಸೂಪರ್ ಮಚ್ಚಿ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಬಗ್ಗೆ ನಟಿ ರಚಿತಾ ರಾಮ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಮತ್ತೆ ಚಿತ್ರೀಕರಣಕ್ಕೆ ಹಿಂತಿರುಗಿದ್ದೇನೆ ಎಂದು . ಜೊತೆಗೆ ಚಿತ್ರೀಕರಣ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್, ಕಡಿಮೆ ಕ್ರೂ ಜೊತೆಗೆ ಚಿತ್ರೀಕರಣ ಪ್ರಾರಂಭಿಸಿದ್ದಾರೆ. ಮೊದಲ ಬಾರಿಗೆ ರಚಿತಾ ರಾಮ್ ತೆಲುಗು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಚಿರಂಜೀವಿ ಅಳಿಯ ಕಲ್ಯಾಣ್ ದೇವ್ ಜೊತೆ ನಟಿ ರಚಿತಾ ರಾಮ್ ತೆರೆಹಂಚಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಪುಲಿ ವಾಸು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೆ ಸಾಕಷ್ಟು ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ, ಲಾಕ್ ಡೌನ್ ಕಾರಣ ಚಿತ್ರೀಕರಣ ಸ್ಥಗಿತವಾಗಿತ್ತು. ಈಗ ಮತ್ತೆ ಶೂಟಿಂಗ್ ಪ್ರಾರಂಭಿಸಿದ್ದು, ಜೋರಾಗಿ ನಡೆಯುತ್ತಿದೆ.