Tuesday, August 16, 2022

Latest Posts

ಕೊರೋನಾ ನಿಯಂತ್ರಣಕ್ಕೆ ರಾಜ್ಯಕ್ಕೆ 6 ತಿಂಗಳ ಸವಾಲು: ಕೇಂದ್ರ ಸರ್ಕಾರ ರಾಜ್ಯಕ್ಕೆ ಏನೆಲ್ಲಾ ಸೂಚನೆ ನೀಡಿದೆ?

ಬೆಂಗಳೂರು: ಮುಂದಿನ ಆರು ತಿಂಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಭಾರತದ 7 ರಾಜ್ಯಗಳ( ಕರ್ನಾಟಕ, ಮಹಾರಾಷ್ಟ್ರ,ತಮಿಳುನಾಡು, ಆಂಧ್ರಪ್ರದೇಶ, ಹೊಸದಿಲ್ಲಿ, ಉತ್ತರಪ್ರದೇಶ, ಪಂಜಾಬ್) ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಿಸುವ ಜಿಲ್ಲೆಗಳಲ್ಲಿ ಹೆಚ್ಚಿನ ಪರೀಕ್ಷೆ ನಡೆಸಬೇಕು. ಕೊರೋನಾ ಸೋಂಕಿನಿಂದ ಬಲಿಯಾಗುವವರ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ರ್ಯಾಪಿಡ್ ಟೆಸ್ಟ್ ಗಳಲ್ಲಿ ಕೊರೋನಾ ನೆಗಟಿವ್ ಬಂದರು, ಕೊರೋನಾ ಲಕ್ಷಣಗಳಿದ್ದರೆ ಅವರಿಗೆ ಆರ್ ಟಿಪಿಸಿ ಆರ್ ಪರೀಖ್ಷೆ ನಡೆಸಬೇಕು. ಹಾಗೂ ವೈಜ್ಞಾನಿಕ ಪರೀಕ್ಷೆಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಲಾಗಿದೆ.

ಕೊರೋನಾ ವೇಳೆಯಲ್ಲಿ ಆರ್ಥಿಕ ಚಟುವಟಿಕೆಗಳನ್ನು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜೀವ ಉಳಿಸುವ ಕಾರ್ಯದಲ್ಲಿ ನಿರತವಾಗಬೇಕು ಎಂದು ತಿಳಿಸಲಾಗಿದೆ.

ರಾಜ್ಯದ ಕೊರೋನಾ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕೋವಿಡ್ ಚಿಕಿತ್ಸೆಗೆ ಕಾರ್ಯ ನಿರ್ವಹಿಸುತ್ತಿರುವ ಲ್ಯಾಬ್ ಗಳ ಕುರಿತು ಮಾಹಿತಿ ನೀಡಿದ್ದು,  ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆಯಿಂದ ಆಕ್ಸಿಜೆನ್ ಘಟಕ ಸ್ಥಾಪಿಸಲು ಪ್ರೋತ್ಸಾಹ ನೀಡಬೇಕು ಎಂದರು.

ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ, ಆರೋಗ್ಯ ಸಚಿವ ಡಾ. ಹರ್ಷವರ್ಧನ್, ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss