ಬೆಂಗಳೂರು: ಕೊರೋನಾ ವೈರಸ್ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನರು ನಿತ್ಯ ಭಯದಲ್ಲೇ ಬದುಕುವಂತಾ ಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಒಂದೇ ದಿನ ಬರೋಬ್ಬರಿ ಸಿಲಿಕಾನ್ ಸಿಟಿಯಲ್ಲಿ 196 ಮಂದಿಗೆ ಕೊರೋನಾ ವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ.
ಪ್ರತಿನಿತ್ಯ ಕೊರೊನಾವೈರಸ್ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲೇ ಮೂವರು ಕೊರೋನಾ ವೈರಸ್ ಮಹಾಮಾರಿಗೆ ಬಲಿಯಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 100ಕ್ಕಿಂತ ಹೆಚ್ಚಾಗಿ ಕಂಡು ಬರುತ್ತಿವೆ. ಈ ಹಿನ್ನೆಲೆ ಬಿಬಿಎಂಪಿ ಮೇಯರ್, ಮತ್ತು ಅಧಿಕಾರಿಗಳು, ವೈದ್ಯಕೀಯ ಅಧಿಕಾರಿಗಳ ಜೊತೆಗೆ ಸಿಎಂ ಬಿ.ಎಸ್,ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿರುವ ಸಭೆಯಲ್ಲಿ ಮಹಾಮಾರಿ ನಿಯಂತ್ರಣದ ಬಗ್ಗೆ ಚರ್ಚಿಸಲಾಗುತ್ತದೆ.