Wednesday, August 17, 2022

Latest Posts

ಕೊರೋನಾ ನಿರ್ವಹಣೆಗಾಗಿ ಕೂಡಲೇ ಅನುದಾನ ಬಿಡುಗಡೆ ಮಾಡಲು ಸಚಿವರಿಗೆ ಶಾಸಕ ಸಾ.ರಾ.ಮಹೇಶ್ ಒತ್ತಾಯ

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಪರಿಸ್ಥಿತಿಯ ನಿರ್ವಹಣೆಗಾಗಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ಸಾ.ರಾ.ಮಹೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್‌ರನ್ನು ಒತ್ತಾಯಿಸಿದ್ದಾರೆ.
ಸಚಿವರಿಗೆ ಪತ್ರ ಬರೆದಿರುವ ಅವರು, ಕೆ.ಆರ್.ನಗರ ಕ್ಷೇತ್ರದಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದೆ.ಕ್ಷೇತ್ರದಲ್ಲಿ ೧೧೫ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಯ ವೆಂಟಿಲೆಟರ್‌ನ್ನು ಮೈಸೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಕೊರತೆ ಇದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಕೂಡಲೇ ವೆಂಟಿಲೇಟರ್ ಸಹಿತ ಅಗತ್ಯ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಕೆ.ಆರ್.ನಗರ ಕ್ಷೇತ್ರಕ್ಕೆ ಯಾವುದೇ ಅನುದಾನ ಬಿಡುಗಡೆ ಆಗಿಲ್ಲ. ೨೦೨೦ರ ಮಾರ್ಚ್ನಲ್ಲಿ ಸಲ್ಲಿಸಿದ್ದ ಪ್ರಸ್ತಾವನೆಗೂ ಅನುದಾನ ಸಿಕ್ಕಿಲ್ಲ. ಅದ್ದರಿಂದ ಕೊರೋನಾ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!