Saturday, April 17, 2021

Latest Posts

ಕೊರೋನಾ ನೆಗೆಟಿವ್ ಪ್ರಮಾಣ ಪತ್ರ ಇರುವವರಿಗೆ ಮಾತ್ರ ‘ಮಕರ ಜ್ಯೋತಿ’ ದರುಶನ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಕರ ಜ್ಯೋತಿ ದರ್ಶನ ಹಾಗೂ ವಿಶೇಷ ಪೂಜೆ ನೆರವೇರಲಿದೆ.ಆದರೆ ಕೊರೋನಾ ನೆಗೆಟಿವ್ ವರದಿ ಪ್ರಮಾಣ ಪತ್ರ ಹೊಂದಿರುವ ಅಯ್ಯಪ್ಪನ ಭಕ್ತರಿಗೆ ಮಾತ್ರ ದೇವಾಲಯದಲ್ಲಿ ಪ್ರವೇಶ ನೀಡಲಾಗುತ್ತಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಸ್ಥಾನ ಮಂಡಳಿ ಅಧ್ಯಕ್ಷ ಎನ್. ವಾಸು, ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕೇವಲ 5 ಸಾವಿರ ಭಕ್ತರಿಗೆ ಮಾತ್ರ ದೇವಾಲಯದ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ದೇವಾಲಯ ಸುತ್ತಮುತ್ತಲಿನಲ್ಲಿ 6 ವಿಭಾಗಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲೆಯನ್ನು 13 ವಿವಿಧ ವಲಯಗಳನ್ನಾಗಿ ವಿಂಗಡಿಸುವ ಮೂಲಕ ಭಕ್ತರ ವಾಹನಗಳ ಸಂಚಾರಕ್ಕೆ ಪೊಲಿಸರು ಅನುವು ಮಾಡಿಕೊಟ್ಟಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss