Tuesday, August 9, 2022

Latest Posts

ಕೊರೋನಾ ಪರೀಕ್ಷೆಯ ಪ್ರಮಾಣದಲ್ಲಿ ವಿಶ್ವದಲ್ಲಿ ಭಾರತ ಎರಡನೇ ಸ್ಥಾನ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ವಿಶ್ವದ ಇತರೆ ದೇಶಗಳಿಗಿಂತ ಭಾರತದಲ್ಲಿ ಕೊರೋನಾ ಪರೀಕ್ಷೆಯ ಪ್ರಮಾಣ ಹೆಚ್ಚಳವಾಗಿದ್ದು, ಇಡೀ ವಿಶ್ವದಲ್ಲಿಯೇ ಭಾರತ ಎರಡನೇ ಸ್ಥಾನದಲ್ಲಿದೆ.
ಎರಡು ವಾರಗಳ ಹಿಂದಿನ ಅಂಕಿ ಅಂಶಗಳನ್ನು ನೋಡುವುದಾದರೆ, ಕೊರೊನಾ ಪರೀಕ್ಷೆ ವಿಷಯದಲ್ಲಿ ಮುಂದೆ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.
ಮಂಗಳವಾರ, ದೇಶದಲ್ಲಿನ ಕೊರೋನಾ ಪರೀಕ್ಷೆಗಳ ಕುರಿತು ಮಾತನಾಡಿದ ಅವರು, ಇದುವರೆಗೂ ದೇಶದಲ್ಲಿ 11.96 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ ವಾರದಿಂದೀಚೆಗೆ ಪ್ರತಿದಿನವೂ 11 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕೊರೋನಾ ಲಸಿಕೆ ಕುರಿತಂತೆ ರಾಷ್ಟ್ರೀಯ ತಜ್ಞರ ತಂಡ ಮಾಹಿತಿಗಳನ್ನು ಕಲೆ ಹಾಕುತ್ತಿದ್ದು, ಲಸಿಕೆ ಸಂಶೋಧನೆ, ಉತ್ಪಾದನೆಯಲ್ಲಿ ನಿರತವಾಗಿರುವ ವಿದೇಶ, ದೇಶದ ಎಲ್ಲಾ ಸಂಸ್ಥೆಗಳೊಂದಿಗೆ ಈ ತಂಡ ಮಾತುಕತೆ ನಡೆಸುತ್ತಿದೆ. ಭಾರತದಲ್ಲಿ 2 ರಿಂದ ಮೈನಸ್ 90 ಡಿಗ್ರಿ ಉಷ್ಣತೆಯಲ್ಲಿ ಲಸಿಕೆಗಳನ್ನು ಸಂಗ್ರಹಿಸಲು ಸಾಧ್ಯವಾಗುವಂತೆ ಲಭವಿರುವ ವ್ಯವಸ್ಥೆಯ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss