Thursday, June 30, 2022

Latest Posts

ಕೊರೋನಾ ಬಾಧಿತ ವಿದ್ಯಾರ್ಥಿಯೊಂದಿಗೆ ಎಸ್ಸೆಸೆಲ್ಸಿ ಪರೀಕ್ಷೆ ಬರೆದಿದ್ದ 20 ವಿದ್ಯಾರ್ಥಿಗಳ ಪರೀಕ್ಷಾ ವರದಿ ನೆಗೆಟಿವ್

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೊರೋನಾ ಬಾಧಿತ ವಿದ್ಯಾರ್ಥಿಯೊಂದಿಗೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ 20 ವಿದ್ಯಾರ್ಥಿಗಳ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು,ಆತಂಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಶನಿವಾರ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತಲ್ಲದೆ,ಪ್ರಕರಣ ಭಾರೀ ಸದ್ದು ಮಾಡಿತ್ತು.
ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳ ಗಂಟಲ ದ್ರವ ಪರೀಕ್ಷೆ ನಡೆಸಲಾಗಿತ್ತು.
ಇದೀಗ ವರದಿ ಬಂದಿದ್ದು,ಕೊಠಡಿಯಲ್ಲಿದ್ದ ಯಾರಿಗೂ ಕೊರೋನಾ ವರದಿಯಾಗಿಲ್ಲ.ಈ ವಿಷಯ ವಿದ್ಯಾರ್ಥಿಗಳಿಗೆ‌ ಹಾಗೂ ಪೋಷಕರಿಗೆ ಸದ್ದಕ್ಕೆ ರಿಲೀಫ್ ನೀಡಿದೆ.
ಆದರೆ ಸೋಂಕಿತ ವಿದ್ಯಾರ್ಥಿ ಯೊಟ್ಟಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಬಗ್ಗೆ ಜಿಲ್ಲಾಡಳಿತ ಶೀಘ್ರ ತೀರ್ಮಾನ ಕೈಗೊಳ್ಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss