ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಬಿಕ್ಕಟ್ಟಿನ ನಡುವೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರ ಬಂದ ಅಮೆರಿಕ!

ವಾಷಿಂಗ್ಟನ್: ಕೊರೋನಾ ವೈರಸ್ ವಿಶ್ವಾದ್ಯಂತ ವ್ಯಾಪಕವಾಗಿ ಹರಡಲು ವಿಶ್ವ ಆರೋಗ್ಯ ಸಂಸ್ಥೆ ಪ್ರಮುಖ ಕಾರಣ ಎಂದು ಆರೋಪಿಸಿದ್ದ ಅಮೆರಿಕ ಈಗ, ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರಬಂದಿದೆ.

ಕಳೆದ ಎರಡು ತಿಂಗಳಿಂದ ಚೀನಾ ಹಾಗೂ ಅಮೆರಿಕ ನಡುವಿನ ಕೊರೋನಾ ಸಂಘರ್ಷದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಜೊತೆ ನಿಂತಿದೆ ಎಂದು ಅಮೆರಿಕ ಆರೋಪಿಸಿತ್ತು. ಈಗ ಅಧಿಕೃತವಾಗಿ ವಿಶ್ವ ಸಂಸ್ಥೆಯ ಸದಸ್ಯತ್ವದಿಂದ ಅಮೆರಿಕ ಹಿಂಪಡೆದಿದೆ.

ಈ ಕುರಿತು ಶ್ವೇತ ಭವನ ಅಧಿಕೃತ ಮಾಹಿತಿ ಹೊರಹಾಕಿದ್ದು, ಜುಲೈ 6, 2021ರವರೆಗೂ ಅಮೆರಿಕ ವಿಶ್ವ ಸಂಸ್ಥೆಯಿಂದ ಹೊರಗುಳಿಯಲಿದೆ ಎಂದು ವಿಶ್ವ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ ಗೆ ತಿಳಿಸಿದೆ.

ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಸುದ್ದಿಗೆ ಒಂದು ಪದದ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದರು “Together!” – ಜಾಗತಿಕ ಮಟ್ಟದ ಸಂಸ್ಥೆಯನ್ನು ತೊರೆಯುವುದು ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಪ್ರಯತ್ನಗಳಿಗೆ ಹೇಗೆ ಅಡ್ಡಿಯಾಗಬಹುದು ಎಂಬ ಬಗ್ಗೆ ಯುಎಸ್ ಆರೋಗ್ಯ ತಜ್ಞರ ಚರ್ಚೆಗೆ ಅವರು ಲಿಂಕ್ ಮಾಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss