Thursday, January 28, 2021

Latest Posts

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ನೇತೃತ್ವದ ಸಚಿವ ಸಂಪುಟವು ಶಿಮ್ಲಾ, ಮಂಡಿ, ಕುಲ್ಲು ಮತ್ತು ಕಾಂಗ್ರಾ ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲು ನಿರ್ಧರಿಸಿತು.
ಇನ್ನು ಡಿಸೆಂಬರ್ 31 ರವರೆಗೆ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದ್ದು, ಆದರೆ ಆನ್‌ಲೈನ್ ತರಗತಿಗಳು ನವೆಂಬರ್ 26 ರಿಂದ ಪ್ರಾರಂಭವಾಗಲಿವೆ.
ಸಾಂಕ್ರಾಮಿಕ ರೋಗದ ದೃಷ್ಟಿಯಿಂದ, 1 ರಿಂದ 4 ನೇ ತರಗತಿಯ ವಿದ್ಯಾರ್ಥಿಗಳು ಮತ್ತು 6 ಮತ್ತು 7 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಹಕ್ಕಿನ ಪ್ರಕಾರ ಬಡ್ತಿ ನೀಡಲಾಗುವುದು ಎಂದಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!