ಬೆಂಗಳೂರು: ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗೆ ಹಣಕಾಸಿನ ಕೊರತೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸದಿದ್ದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕೊರೋನಾದಿಂದ ಭಯಭೀತಗೊಂಡಿದ್ದ ಜನ ಈಗ ನೆರೆಗೂ ಹೆದರಿ ನಲುಗುತ್ತಿದ್ದಾರೆ ಸರ್ಕಾರಕ್ಕೆ ಇದು ಅಗ್ನಿ ಪರೀಕ್ಷೆ. ಎಚ್ಚರ ತಪ್ಪದೆ ಕೆಲಸ ಮಾಡಬೇಕು. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗಲಿದೆ ಎಂದರು. ಅಷ್ಟೇ ಅಲ್ಲದೆ ಸಚಿವರು ಮತ್ತು ಅಧಿಕಾರಿಗಳು ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದಿದ್ದಾರೆ.