Thursday, July 7, 2022

Latest Posts

ಕೊರೋನಾ ಸೋಂಕಿಗೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಜಾರಿಗೊಳಿಸಿದ ದೆಹಲಿ ಸರ್ಕಾರ

ಹೊಸದಿಲ್ಲಿ: ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಜಾರಿಗೊಳಿಸಿದೆ.

ಸಾಂಕ್ರಾಮಿಕ ರೋಗಗಳ ಕಾಯ್ದೆ 1897ರ ಅಡಿಯಲ್ಲಿ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯದ ಕಾರ್ಯಕ್ರಮಗಳಿಗೆ ನಿಷೇಧ ಹೇರಿದೆ. ಮದುವೆ ಕಾರ್ಯಕ್ರಮಕ್ಕೆ ಯಾವುದೇ ನಿಷೇಧವಿರುವುದಿಲ್ಲ. ಆದರೆ, ಮದುವೆ ಸಮಾರಂಭಗಳನ್ನು ಮುಂದೂಡಿದರೆ ಉತ್ತಮ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿಕಾಯ್ದೆಯ ವಿರುದ್ಧವಾಗಿ ಕೆಲವು ತಿಂಗಳುಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಈ ನೂತನ ನಿಯಮ ಎಲ್ಲರಿಗೂ ಅನ್ವಯವಾಗಲಿದ್ದು, 50 ಜನರಿಗಿಂತ ಹೆಚ್ಚು ಜನರು ಗುಂಪು ಸೇರಬಾರದು. ಆದೇಶವನ್ನು ಉಲ್ಲಂಘಿಸಿದರೆ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅಡಿಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಮೆಜಿಸ್ಟೇಟ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss