ಕೊರೋನಾ ಭೀತಿ: ಬೆಳಗಾವಿಯ ಈ 3 ದೇವಾಲಯಗಳು ಬಂದ್ !

0
33

ಬೆಳಗಾವಿ: ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೋನಾ ಭೀತಿ ಹಿನ್ನಲೆಯಲ್ಲಿ ಜಿಲ್ಲಾಡಳಿತ ಈ ಆದೇಶ ನೀಡಿದೆ.
ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸವದತ್ತಿ ರೇಣುಕಾ ಯಲ್ಲಮ್ಮ ದೇವಿ, ಜೋಗುಳಬಾವಿ ಸತ್ತೆಮ್ಮದೇವಿ, ರಾಯಭಾಗದ ಚಿಂಚಲಿ ಮಾಯಕ್ಕ ದೇವಿ ದೇವಾಯಗಳಿಗೆ ಜುಲೈ 31ರ ತನಕ ಭಕ್ತರು ಭೇಟಿ ನೀಡುವಂತಿಲ್ಲ. ಈಗಾಗಲೇ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದ್ದು, ಅದನ್ನು ಇನ್ನೂ ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ. ಈ ದೇವಾಲಯಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಡೆಸಲು ವಿನಾಯಿತಿ ನೀಡಲಾಗಿದೆ. ಆದರೆ ಯಾವುದೇ ಭಕ್ತರು ದೇವಾಲಯಕ್ಕೆ ಭೇಟಿ ನೀಡುವಂತಿಲ್ಲ.

LEAVE A REPLY

Please enter your comment!
Please enter your name here