Wednesday, June 29, 2022

Latest Posts

ಕೊರೋನಾ ಲಸಿಕೆ ಕುರಿತ ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ: ಆರೋಗ್ಯ ಸಚಿವ ಹರ್ಷವರ್ಧನ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶಾದ್ಯಂತ ಪ್ರಾರಂಭವಾಗಿರುವ ಕೊರೋನಾ ಲಸಿಕೆ ಡ್ರೈ ರನ್ ಗೆ ಭಾರತ ಸಕಲ ಸಿದ್ಧತೆ ನಡೆಸಲಾಗಿದ್ದು, ಲಸಿಕೆ ತಾಲೀಮು ಎಲ್ಲಾ ರಾಜ್ಯಗಳಲ್ಲಿ ಪ್ರಾರಂಭ ಮಾಡಲಾಗಿದೆ.

ರಾಷ್ಟ್ರರಾಜಧಾನಿ ದೆಹಲಿಯ ದರ್ಯಾಗಂಜ್ ಪ್ರಾಥಮಿಕ ಆರೋಗ್ಯ ಕೇಂದ್ರ, ಗುರು ತೇಗ್ ಬಹದ್ದೂರ್ ಆಸ್ಪತ್ರೆ ಮತ್ತು ವೆಂಕಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ.

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಕೊರೋನಾ ಲಸಿಕೆ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ. ಪೊಲೀಯೋ ಲಸಿಕೆ ವಿತರಿಸುವ ವೇಳೆಯಲ್ಲಿಯೂ ವದಂತಿಗಳು ಹಬ್ಬಿದ್ದವು. ಆದರೆ ಜನರು ಲಸಿಕೆ ಪಡೆದ ಕಾರಣ ಈಗ ದೇಶ ಪೊಲೀಯೋ ಮುಕ್ತವಾಗಿದೆ ಎಂದು ತಿಳಿಸಿದರು.

ಈಗಾಗಲೇ ನಾಲ್ಕು ರಾಜ್ಯಗಳಿಂದ ಮಾಹಿತಿ ಪಡೆಯಲಾಗಿದ್ದು, ಎಲ್ಲವೂ ಮಾರ್ಗಸೂಚಿಯಂತೆ ನಡೆಸಲಾಗುತ್ತಿದೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಡ್ರೈ ರನ್ ನಡೆಸಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss