Wednesday, July 6, 2022

Latest Posts

ಕೊರೋನಾ ಲಸಿಕೆ ಪಡೆಯಲು ರಾಷ್ಟ್ರ ರಾಜಧಾನಿ ಸನ್ನದ್ಧ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಲಸಿಕೆ ಪಡೆಯಲು ಸಂಪೂರ್ಣ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೊರೋನಾ ಲಸಿಕೆಯ ಸಿದ್ಧತೆಯ ಕುರಿತು ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರಾಜ್ಯದಲ್ಲಿ ಕೊರೋನಾ ಲಸಿಕೆ ಸಿದ್ಧತೆಗಳು ಸಂಪೂರ್ಣವಾಗಿದ್ದು, ಮೊದಲಿಗೆ ಆರೋಗ್ಯ ಕಾರ್ಯಕರ್ತರು ಸೇರಿದಂತೆ 50 ಲಕ್ಷ ಮಂದಿಗೆ ಲಸಿಕೆ ನೀಡಲಾಗುತ್ತದೆ ಎಂದರು.

ಒಬ್ಬ ವ್ಯಕ್ತಿಗೆ ಎರಡು ಡೋಸ್ ನಂತೆ ನಮಗೆ 1.02 ಕೋಟಿ ಡೋಸ್ ಗಳ ಅಗತ್ಯವಿದೆ. ಸದ್ಯ ರಾಜ್ಯದಲ್ಲಿ 74 ಲಕ್ಷ ಡೋಸ್ ಗಳನ್ನು ಸಂಗ್ರಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss