ಬೆಂಗಳೂರು: ಮಹಾಮಾರಿ ಕೊರೋನಾಗೆ ಎಎಸ್ಐ ಒಬ್ಬರು ಬಲಿಯಾಗಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 55 ವರ್ಷದ ಎಎಸ್ಐ ಕೊರೋನಾಗೆ ಮೃತಪಟ್ಟಿದ್ದಾರೆ.ಧಾರವಾಢ ಜಿಲ್ಲೆಯಲ್ಲಿ ಇವರು ಕೊರೋನಾ ವಾರಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೊರೋನಾ ಲಕ್ಷಣ ಕಂಡುಬಂದ ಹಿನ್ನೆಲೆ ಜುಲೈ ಒಂದರಿಂದಲೇ ಕ್ವಾರೆಂಟೈನ್ಗೆ ಒಳಪಡಿಸಲಾಗಿತ್ತು. ಏಳರಂದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.ಇವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.