Wednesday, July 6, 2022

Latest Posts

ಕೊರೋನಾ ವಿರುದ್ಧ ಭಾರತದ ಹೋರಾಟ: 200 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳನ್ನು ನೀಡುತ್ತೇವೆ ಎಂದ ಪಾಂಡ್ಯ ಬ್ರದರ್ಸ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………….. 

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಕೊರೊನಾ ಹೆಚ್ಚುತ್ತಿದ್ದು, ಸಾವಿರಾರು ಮಂದಿ ಆಕ್ಸಿಜನ್ ಕೊರತೆಯಿಂದಲೇ ಸಾವೀಗೀಡಾಗುತ್ತಿದ್ದಾರೆ. ಈ ಕಾರಣದಿಂದ ಸಿನಿಮಾ ನಟರು, ದೇಶ ವಿದೇಶದ ಕ್ರಿಕೆಟಿಗರು ಭಾರತದ ಜನತೆಯ ನೆರವಿಗೆ ತಮ್ಮ ಕೈಲಾದಂತಹ ನೆರವು ಘೋಷಿಸುತ್ತಿದ್ದಾರೆ. ಈ ಅಭಿಯಾನಕ್ಕೆ ಭಾರತ ತಂಡದ ಕ್ರಿಕೆಟಿಗರಾದ ಪಾಂಡ್ಯ ಸಹೋದರರು ಕೂಡ ಕೈಜೋಡಿಸಿದ್ದಾರೆ.
ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ತಮ್ಮ ಕುಟುಂಬದ ಪರವಾಗಿ 200 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳನ್ನು ನೀಡುವುದಾಗಿ ತಿಳಿಸಿದ್ದಾರೆ.
ಈ ಸಂದಿಗ್ಧ ಪರಿಸ್ಥಿತಿಯಲ್ಲಿ ನಮ್ಮ ದೇಶವು ಅನುಭವಿಸುತ್ತಿರುವ ಕಷ್ಟವನ್ನು ನಾವೆಲ್ಲರೂ ಅರ್ಥಮಾಡಿಕೊಂಡಿದ್ದೇವೆ. ಇಂತಹ ಕಷ್ಟದ ಸಂದರ್ಭದಲ್ಲೂ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳು, ಮುಂಚೂಣಿ ಕಾರ್ಮಿಕರಿಗೆ ಕೃತಜ್ಞತೆಗಳನ್ನು ಅರ್ಪಿಸಬೇಕು ಎಂದು ಪಾಂಡ್ಯ ಹೇಳಿದ್ದಾರೆ.
ಕೃನಾಲ್ , ನಾನು ಮತ್ತು ನಮ್ಮ ತಾಯಿ ಒಟ್ಟಾರೆ ನಮ್ಮ ಕುಟುಂಬ ಈ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದು ನಿರ್ಧಿಸಿದ್ದು, 200 ಆಕ್ಸಿಜನ್ ಕಾನ್ಸೆಂಟ್ರೇಟರ್( ಆಮ್ಲಜನಕ ಸಾಂದ್ರಕ)​ಗಳನ್ನು ಅಗತ್ಯವಿರುವ ಭಾರತದ ಗ್ರಾಮೀಣ ಪ್ರದೇಶಗಳಿಗೆ ದಾನ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss