Thursday, July 7, 2022

Latest Posts

ಕೊರೋನಾ ವೈರಸ್ ಮುನ್ನೆಚ್ಚರಿಕೆ: ಅಖಿಲ ಭಾರತೀಯ ಪ್ರತಿನಿಧಿ ಸಭಾ ರದ್ದು

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ಮಾ.15ರಂದು ಆಯೋಜಿಸಿದ್ದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನು ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಮಾಡಲಾಗಿದೆ.

ದೇಶದಲ್ಲಿ ಕೊರೋನಾ ಮಹಾಮಾರಿಗೆ ಇದಾಗಲೇ 80ಕ್ಕೂ ಹೆಚ್ಚು ಜನರಿಗೆ ಸೋಂಕು ಹರಡಿರುವ ಕಾರಣ ರಾಜ್ಯದಲ್ಲಿ ಶುಕ್ರವಾರ ಸಿಎಂ ಬಿ ಎಸ್ ವೈ ಸುದ್ದಿಗೋಷ್ಠಿ ನಡೆಸಿ ಮಾಲ್, ಚಿತ್ರಮಂದಿರ, ಮದುವೆ ಹಾಗೂ ಸಭಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಆದೇಶಿಸಿದ್ದರು.

ಸಹಕಾರ್ಯವಾಹ ಸುರೇಶ್ ಜೋಷಿ (ಬೈಯ್ಯಾಜಿ ) ಟ್ವೀಟ್ ಮೂಲಕ ತಿಳಿಸಿದ್ದಾರೆ. ಮಾ. 15 ರಿಂದ ಮಾ.17ರ ವರೆಗೆ ನಡೆಯಬೇಕಿದ್ದ ವಾರ್ಷಿಕ ಎಬಿಪಿಎಸ್ ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

ಅಖಿಲ ಭಾರತೀಯ ಪ್ರತಿನಿಧಿ ಸಭೆಗೆ ವಿಶ್ವ ಹಿಂದು ಪರಿಷತ್ ನ ಅಧ್ಯಕ್ಷರಾದ ವಿಷ್ಣು ಸದಾಶಿವ ಕೊಕ್ಜೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಅಧ್ಯಕ್ಷರಾದ ಸುಬ್ಬಯ್ಯ ಶಣ್ಮುಗಂ,  ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಜೆ. ಪಿ. ನಡ್ಡ, ವನವಾಸಿ ಕಲ್ಯಾಣ, ವಿದ್ಯಾ ಭಾರತಿ, ಸಕ್ಷಮ ಸಂಘಟನೆಗಳ ಅಧ್ಯಕ್ಷರುಗಳು ಮತ್ತು ಇತರ ಪ್ರತಿನಿಧಿಗಳು  ಭಾಗವಹಿಸುವ ನಿರೀಕ್ಷೆಯಲಿತ್ತು.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಸಭೆಗೆ 1500 ಆರೆಸ್ಸೆಸ್ ನ ಪ್ರತಿನಿಧಿಗಳು ಹಾಗೂ ವಿಶೇಷ ಆಹ್ವಾನಿತರು ಭಾಗಿಯಾಗಲಿದ್ದು, ಇದರಲ್ಲಿ 44 ಪ್ರಾಂತಗಳನ್ನೊಳಗೊಂಡ 11 ಕ್ಷೇತ್ರದಿಂದ ಸಂಘದ ಪ್ರತಿನಿಧಿಗಳು,  ಸಂಘ ಪರಿವಾರದ 25 ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss