ಕೇರಳ: ರಾಜ್ಯದಲ್ಲಿ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಇಲಾಖೆ ಸಚಿವೆ ಕೆ.ಕೆ.ಶೈಲಜಾ ಅಧಿಕಾರಿಗಳೊಂದಿಗೆ ಮುನ್ನೆಚ್ಚರಿಕೆ ಸಭೆ ನಡೆಸಿದರು.
ಚೀನಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ಕೊರೋನಾ ವೈರಸ್ ನಿಂದಾಗಿ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ಈ ವೈರಸ್ ನಿಂದ ಬಳಲುತ್ತಿದ್ದಾರೆ. ವುಹಾನ್ ನಗರದಿಂದ ಕೇರಳಕ್ಕೆ ಮರಳಿದ್ದ ವಿದ್ಯಾರ್ಥಿಯೊಬ್ಬರಲ್ಲಿ ಈ ವೈರಸ್ ಪತ್ತೆಯಾಗಿದ್ದು, ರೋಗಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿತ್ತು.
ಕೇರಳದಲ್ಲಿ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಸಭೆಯಲ್ಲಿ ಸಚಿವೆ ಶೈಲಜಾ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಯಾವ ರೀತಿ ಕಟ್ಟೆಚ್ಚರ ವಹಿಸಬೇಕು ಹಾಗೂ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.