Friday, July 1, 2022

Latest Posts

ಕೊರೋನಾ ವೈರಾಣು ಹರಡುವಿಕೆ ನಿಯಂತ್ರಣ| ಮೈಸೂರು ಚಾಮುಂಡಿ ಬೆಟ್ಟಕ್ಕೆ ಇನ್ನೂ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ರಕ್ತಾ ಬೀಜಾಸುರನಂತೆ ಹರಡುತ್ತಿರುವ ಕೊರೋನಾ ವೈರಾಣುವನ್ನು ನಿಯಂತ್ರಣ ಮಾಡಲು ಮೂರು ದಿನಗಳ ಕಾಲ ಮೈಸೂರಿನ ಪ್ರಸಿದ್ಧ ಧಾರ್ಮಿಕ ಪ್ರವಾಸಿ ತಾಣವಾಗಿರುವ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ಇದೀಗ ನಿರ್ಬಂಧ ಹೇರಿದೆ.

ನಾಡ ಶಕ್ತಿದೇವತೆ ಚಾಮುಂಡೇಶ್ವರಿಯ ದರ್ಶನಕ್ಕೆಂದು ಸಾವಿರಾರು ಮಂದಿ ಭಕ್ತರು ಶುಕ್ರವಾರ, ರಜಾ ದಿನವಾದ ಶನಿವಾರ ಹಾಗೂ ಭಾನುವಾರದಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ. ಇದರಿಂದಾಗಿ ಸಮುದಾಯಕ್ಕೆ ಕೊರೋನಾ ಸೋಂಕು ಹರಡುವ ಸಾಧ್ಯತೆಯಿತ್ತು. ಇದನ್ನು ತಡೆಯುವ ಉದ್ದೇಶದಿಂದ ಆಷಾಢ ಮಾಸದಲ್ಲಿ ಶುಕ್ರವಾರ, ಶನಿವಾರ ಹಾಗೂ ಭಾನುವಾರದಂದು ಬೆಟ್ಟದ ನಿವಾಸಿಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು.

ಆದರೆ ಈಗ ಜುಲೈ ೨೦ರ ಸೋಮವಾರ ಕೂಡ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಶುಕ್ರವಾರದಿಂದ ಸೋಮವಾರದ ತನಕ ಸತತವಾಗಿ ನಾಲ್ಕು ದಿನಗಳ ಕಾಲ ಜನರಿಗೆ ಸಾರ್ವನಿಕರಿಗೆ ಪ್ರವೇಶ ಇಲ್ಲದಂತಾಗಿದೆ. ತುರ್ತು ಹಾಗೂ ಗ್ರಾಮಸ್ಥರ ವಾಹನಗಳ ಹೊರತುಪಡಿಸಿ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶ ಬಂದ್ ಆಗಿದೆ.

ಅಲ್ಲದೆ ಈ ನಿರ್ಬಂಧ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿಯ ಸಹೋದರಿ ಉತ್ತನಹಳ್ಳಿ ಮಾರಮ್ಮನ ದೇವಸ್ಥಾನಕ್ಕೂ ಅನ್ವಯವಾಗಲಿದೆ. ನಿರ್ಬಂಧದ ಮೂಲಕ ಉತ್ತನಹಳ್ಳಿ ಮಾರಮ್ಮ ದೇವಸ್ಥಾನದ ವತಿಯಿಂದ ದಾನಿಗಳಿಂದ ಪ್ರಸಾದ ತಯಾರಿಗೆ ಮತ್ತು ವಿತರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಇನ್ನು ಮಂಗಳವಾರ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಾಲಯ ಎಂದಿನAತೆ ತೆರೆಯಲಿದ್ದು, ಭಕ್ತರು ಭೇಟಿ ನೀಡಬಹುದು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss