ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,684 ಕೊರೋನಾ ಸೋಂಕು ವರದಿಯಾಗಿದ್ದು, ದೇಶದಲ್ಲಿ ಇದೀಗ 87,73,479 ಸೋಂಕಿತರು ದಾಖಲಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ದೇಶದಲ್ಲಿ 4,80,719 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ 47,992 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಒಟ್ಟು 81,63,572 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.