Wednesday, August 10, 2022

Latest Posts

ಕೊರೋನಾ ಸಮಸ್ಯೆ ಮರೆಮಾಚಿಕೊಳ್ಳಲು ಚೀನಾ ಭಾರತದ ಗಡಿ ಭಾಗದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ: ಸಚಿವ ಈಶ್ವರಪ್ಪ

ಶಿವಮೊಗ್ಗ: ಕೊರೋನಾ ಸಮಸ್ಯೆಯನ್ನು ಮರೆಮಾಚಿಕೊಳ್ಳಲು ಚೀನಾ ಭಾರತದ ಗಡಿ ಭಾಗದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾ ಸಮಸ್ಯೆ ಹಿನ್ನೆಲೆಯಲ್ಲಿ ಇಡೀ ವಿಶ್ವ ಚೀನಾ ಕಡೆಗೆ ಬೊಟ್ಟು ಮಾಡುತ್ತಿದೆ. ಇದನ್ನು ಮರೆಮಾಚಿಕೊಳ್ಳಲು ಚೀನಾ ಹವಣಿಸುತ್ತಿದೆ. ಜೊತೆಗೆ ಭಾರತದಲ್ಲಿ ಚೀನಾದ ವಸ್ತುಗಳನ್ನು ಖರೀದಿ ಮಾಡಬಾರದು ಎಂಬ ಅಂಶ ವ್ಯಾಪಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಾಬರಿ ಆಗಿರುವ ಚೀನಾ ಕುಕೃತ್ಯಕ್ಕೆ ಇಳಿದಿದೆ ಎಂದರು.
ಅಲ್ಲದೇ ಭಾರತ ಚೀನಾದ ಗಡಿ ತನಕ ಸುಸಜ್ಜಿತ ರಸ್ತೆ ನಿರ್ಮಾಣ ಮಾಡುತ್ತಿದೆ. ಇದುವರೆಗೂ ಯಾವುದೇ ಸರ್ಕಾರ ಇದನ್ನು ಮಾಡಿರಲಿಲ್ಲ. ಈಗಿನ ಕೇಂದ್ರ ಸರ್ಕಾರ ಮಾಡುತ್ತಿದೆ. ಇದನ್ನು ಸಹಿಸಿಕೊಳ್ಳಲು ಚೀನಾಕ್ಕೆ ಆಗುತ್ತಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss