ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸವಾಲುಗಳ ನಡೆವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಯಲಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.
ಅಖಿಲ ಭಾರತೀಯ ಅಖಾಡಾ ಪರಿಷತ್ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ರಾವತ್ ಅವರು ಸಭೆ ನಡೆಸಿ, ನಂತರ ಮಾತನಾಡಿದ ಅವರು 2021ರ ಜನವರಿ 14ರಿಂದ ಕುಂಭಮೇಳ ಆರಂಭವಾಗಲಿದ್ದು, ಸಾಂಕ್ರಾಮಿಕದ ಸವಾಲಿನ ನಡುವೆಯೇ ಕುಂಬಮೇಳ ನಡೆಯಲಿದೆ ಎಂದು ಹೇಳಿದ್ದಾರೆ.
ಕೋವಿಡ್-19 ಪರಿಸ್ಥಿತಿಯನ್ನು ಆಧರಿಸಿ ಕುಂಭಮೇಳದ ವಿಸ್ತಾರ ನಿರ್ಧರಿಸಲಾಗುತ್ತದೆ. ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳಿಗೆ ಕುಂಭಮೇಳದ ಸಿದ್ಧತೆಯ ಕಾರ್ಯಗಳ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಸುರಕ್ಷಿತ ಕ್ರಮದೊಂದಿಗೆ ಕುಂಭಮೇಳೆ ನಡೆಸಲಾಗುತ್ತದೆ’ ಎಂದು ಸಿಎಂ ರಾವತ್ ಹೇಳಿದ್ದಾರೆ.
ಕುಂಭಮೇಳಕ್ಕೆ ಸಂಬಂಧಿಸಿದಂತೆ ಎಲ್ಲಾ ಕಾಮಗಾರಿ ತಯಾರಿಗಳು ಬಹುತೇಕ ಮುಕ್ತಾಯವಾಗಿದ್ದು, ಡಿಸೆಂಬರ್ 15ಕ್ಕೆ ಪೂರ್ಣಗೊಳ್ಳಲಿವೆ ಎಂದು ಕುಂಭಮೇಳದ ಅಧಿಕಾರಿ ದೀಪಕ್ ರಾವತ್ ಹೇಳಿದ್ದಾರೆ.