Thursday, July 7, 2022

Latest Posts

ಕೊರೋನಾ ಸೋಂಕಿಗೆ ಕಲಬುರಗಿ ಜಿಲ್ಲೆಯಲ್ಲಿ ಓರ್ವ ಸಾವು

ಕಲಬುರಗಿ: ಕೊರೋನಾ‌ ಸೋಂಕಿನಿಂದ ಆಳಂದ ಪಟ್ಟಣದ ಹೊಸ ಅನ್ಸಾರಿ ಗಲ್ಲಿ ಪ್ರದೇಶ 58 ವರ್ಷದ ಪುರುಷ (42571) ಮೃತಪಟ್ಟಿದ್ದಾರೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌37ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಹೃದಯ ರೋಗದಿಂದ ಬಳಲುತ್ತಿದ್ದ ಇವರು ಜು.8 ರಂದು ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದು, ಮಂಗಳವಾರ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss