Wednesday, August 10, 2022

Latest Posts

ಕೊರೋನಾ ಸೋಂಕಿಗೆ ಬಿಜೆಪಿ ಶಾಸಕ ಬಲಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:
ಉತ್ತರಾಖಾಂಡದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
15 ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದು,ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುರೇಂದ್ರ ಸಿಂಗ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸುರೇಂದ್ರ ಸಿಂಗ್ ಅವರು ಉತ್ತರಾಖಾಂಡದ ಅಲ್ಮೋರಾ ಜಿಲ್ಲೆ ಸಾಲ್ಟ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಕೆಲ ದಿನಗಳ ಹಿಂದೆ ಇವರ ಪತ್ನಿ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss