Tuesday, June 28, 2022

Latest Posts

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ದೇಶದಲ್ಲಿ 24 ಗಂಟೆಯಲ್ಲಿ ಪತ್ತೆಯಾದ ಪ್ರಕರಣಗಳೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 19,556 ಹೊಸ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 19,556 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,00,75,116 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 30,376 ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ96,36,487ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,92,518 ಸಕ್ರಿಯ ಪ್ರಕರಣಗಳಿವೆ.

ನಿನ್ನೆ ಒಂದೇ ದಿನ ದೇಶಾದ್ಯಂತ 301 ಮಂದಿ ಸೋಂಕಿತರು ಮೃತಪಟ್ಟಿದ್ದು, ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,46,111ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss