Wednesday, August 10, 2022

Latest Posts

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,584 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 12,584 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,04,79,179ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 18,385 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,01,11,294 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,16,558 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 167 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,51,327ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss