Tuesday, August 16, 2022

Latest Posts

ಕೊರೋನಾ ಸೋಂಕಿತ ಗರ್ಭಿಣಿ ಸಂಪರ್ಕಕ್ಕೆ ಬಂದಿದ್ದ 50 ಜನರಿಗೆ ನೆಗಟಿವ್: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹೊಸಪೆಂಜಳ್ಳಿ ಗ್ರಾಮಕ್ಕೆ ಮಹಾರಾಷ್ಟ್ರ ದಿಂದ ಆಗಮಿಸಿದ್ದ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ 50ಜನರ ಪರೀಕ್ಷಾ ವರದಿ ನೆಗಟಿವ್ ಬಂದಿದೆ.

ಮಹಾರಾಷ್ಟ್ರ ದಿಂದ ಗ್ರಾಮಕ್ಕೆ ಬಂದಿದ್ದ ಈ ಗರ್ಭಿಣಿ ಮಹಿಳೆಯ ಗಂಟಲು ಮಾದರಿಯನ್ನು ಪರೀಕ್ಷೆ ಗೆ ಒಳಪಡಿಸಿದಾಗ ಪಾಸಿಟಿವ್ ಬಂದಿತ್ತು. ಹಾಗಾಗಿ ಗ್ರಾಮವನ್ನು ಸೀಲ್ ಡೌನ್ ಮಾಡಿದ ಅಧಿಕಾರಿಗಳು, ಸೋಂಕಿತೆಯ ಸಂಪರ್ಕಕ್ಕೆ ಬಂದಿದ್ದ 50ಜನರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಗ್ರಾಮದಲ್ಲಿ ಕೊರೋನಾ ಹರಡುವ ಆತಂಕ ಎದುರಾಗಿತ್ತು. ಆದರೆ ಈಗ ಎಲ್ಲರ ಪರೀಕ್ಷಾ ವರದಿ ನೆಗಟಿವ್ ಬಂದಿರುವುದರಿಂದ ಗ್ರಾಮಸ್ಥರು, ಅಧಿಕಾರಿಗಳು ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss