Tuesday, June 28, 2022

Latest Posts

ಕೊರೋನಾ ಸೋಂಕಿತ ವೃದ್ಧೆ ಹೃದಯಾಘಾತದಿಂದ ಸಾವು

ಗದಗ: ಕೊರೋನಾ ಸೋಂಕಿಗೆ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ 12:55ಕ್ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಏ.4ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಪರೀಕ್ಷೆಗಾಗಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು, ಬಳಿಕ ಏ.6ರಂದು ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತು. ಬುಧವಾರ ತಡರಾತ್ರಿ ಕಾರ್ಡಿಯಾಕ್ ಅರೆಸ್ಟ್ ನಿಂದ ವೃದ್ಧೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss