Sunday, August 14, 2022

Latest Posts

ಕೊರೋನಾ ಸೋಂಕಿನಿಂದ ಆಸ್ಪತ್ರೆ ಸೇರಿದ್ದ ಗರ್ಭಿಣಿ ಕೋವಿಡ್ ಆಸ್ಪತ್ರೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದಳು!

ಮಂಗಳೂರು: ಕೊರೋನಾ ಸೋಂಕಿನಿಂದಾಗಿ ಮಂಗಳೂರಿನ ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಮಹಾರಾಷ್ಟ್ರದಿಂದ ಆಗಮಿಸಿದ್ದ  ಕಿನ್ನಿಗೋಳಿಯ 30 ವರ್ಷದ ಮಹಿಳೆ ವೆನ್ಲಾಕ್‌ನಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿದೆ. ಹುಟ್ಟಿದ ಮಗು 2.9 ಕೆ.ಜಿ. ತೂಕ ಇದ್ದು, ಆರೋಗ್ಯವಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss