Saturday, August 13, 2022

Latest Posts

ಕೊರೋನಾ ಸೋಂಕಿನಿಂದ ಜಿ.ಪಂ ಅಧ್ಯಕ್ಷ ಬಸನಗೌಡ ದೇಸಾಯಿ ನಿಧನ

ಹಾವೇರಿ: ಕೊರೋನಾ ಸೋಂಕಿನಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಅವರು ಶನಿವಾರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರಿಗೆ ಕಳೆದ ಒಂದು ತಿಂಗಳ ಹಿಂದ ಕೊರೋನಾ ಸೋಂಕು ದೃಢ ಪಟ್ಟಿತ್ತು. ಈ ಸಂದರ್ಭದಲ್ಲಿ ಇವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇವರ ಆರೋಗ್ಯ ತೀರ್ವ ವ್ಯತ್ಯಾಸ ಕಂಡುಬಂದಿದ್ದರಿಂದ ಇವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಇವರನ್ನು ತೀರ್ವನಿಗಾ ಘಟಕದಲ್ಲಿ ಇಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ೩.೩೦ ಸಮಯದಲ್ಲಿ ನಿಧನರಾಗಿದ್ದಾರೆ.
ಬಸನಗೌಡ ದೇಸಾಯಿಯ ಅವರು ಮಡದಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಂತಾಪ
ಬಸನಗೌಡ ದೇಸಾಯಿಯ ಅವರ ನಿಧನಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿ.ಪಂ ಸದಸ್ಯರಾದ ಕೊಟ್ರೇಶಪ್ಪ ಬಸೇಗಣ್ಣಿ, ಟಾಕನಗೌಡ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ, ಮುಖಂಡರಾದ ಎಂ.ಎಂ.ಮೈದೂರ, ಸಂಜೀವಕುಮಾರ ನೀರಲಗಿ, ಪಿ.ಎಸ್.ಬಿಷ್ಟನಗೌಡರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss