ಕೊರೋನಾ ಸೋಂಕಿನಿಂದ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ

0
30

ಬೆಂಗಳೂರು: ಕೋರೋನಾ ವೈರಸ್ ಹಿನ್ನಲೆ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ದೇಶದಲ್ಲಿ ಕೊರೋನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21ದಿನಗಳ ಲಾಕ್ ಡೌನ್ ಘೋಷಿಸಿದರು. ಈಗಾಗಲೇ ರಾಜ್ಯ ಶಿಕ್ಷಣ ಇಲಾಖೆ ಮಾ.27 ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಏ.20ರವರೆಗೂ ಮುಂದೂಡಿದೆ. ಇದೀಗ ಏ.11ರಂದು ನಿಗಸಿಯಾಗಿದ್ದ 2019ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಇದೀಗ ಮುಂದೂಡಿದೆ.

ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here