Saturday, August 13, 2022

Latest Posts

ಕೊರೋನಾ ಸೋಂಕಿನಿಂದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಮೈಸೂರು: ಬಿಜೆಪಿಯ ಹಿರಿಯ ಮುಖಂಡರಾದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರವರು ಕೊರೋನಾ ಸೋಂಕಿನಿAದ ಗುಣವಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತೀಚೆಗೆ ಅವರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿದಾಗ, ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕೂಡಲೇ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಸೋಂಕಿನಿAದ ಗುಣವಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಕಡ್ಡಾಯವಾಗಿ ಇರುವಂತೆ ಸೂಚಿಸಲಾಗಿದೆ. ಈ ಹಿನ್ನಲ್ಲೆಯಲ್ಲಿ ಶ್ರೀನಿವಾಸ್ ಪ್ರಸಾದ್‌ರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ವಾರದ ಬಳಿಕ ಮೈಸೂರಿಗೆ ಮರಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss