Monday, July 4, 2022

Latest Posts

ಕೊರೋನಾ ಸೋಂಕಿನಿ0ದಾಗಿ ಬಿಜೆಪಿಯ ಮಾಜಿ ಶಾಸಕ ಸಿ.ಗುರುಸ್ವಾಮಿ ನಿಧನ

ಮೈಸೂರು: ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡರಾದ ಸಿ.ಗುರು ಸ್ವಾಮಿ ಅವರು ಬುಧವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಕೊರೋನಾ ಸೋಂಕಿನಿAದ ಬಳಲುತ್ತಿದ್ದ ಅವರು ಮೈಸೂರಿನ ಜೆ. ಎಸ್. ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತ ಪಟ್ಟಿದ್ದಾರೆ.

ಜಿ.ಪಂ. ಮಾಜಿ ಅಧ್ಯಕ್ಷೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಕೀಲೆ ನಾಗಶ್ರೀ ಪ್ರತಾಪ್ ಸೇರಿದಂತೆ ಇಬ್ಬರು ಪುತ್ರಿಯರು, ಪತ್ನಿ ಶೀಲಾ ಅವರನ್ನು ಗುರುಸ್ವಾಮಿ ಅಗಲಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಜೀವನ ಆರಂಭಿಸಿದ್ದರು. ಜನತಾದಳ ಇದ್ದಾಗ ಅವಿಭಜಿತ ಮೈಸೂರು ಜಿಲ್ಲೆಯ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು. ಹಿರಿಯ ರಾಜಕೀಯ ನಾಯಕ, ಕೇಂದ್ರದ ಮಾಜಿ ಸಚಿವ ರಾಜಶೇಖರಮೂರ್ತಿಯವರ ಶಿಷ್ಯರಾಗಿದ್ದರು. ರಾಜಶೇಖರಮೂರ್ತಿಯವರು ಬಿಜೆಪಿ ಸೇರಿದ ಸಂದರ್ಭದಲ್ಲಿ ಅವರನ್ನು ಅನುಸರಿಸಿ ಗುರುಸ್ವಾಮಿ ಸಹ ಬಿಜೆಪಿ ಸೇರಿದರು.

೧೯೯೯ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚಾಮರಾಜನಗರ ಕ್ಷೇತ್ರದಿಂದ ಗೆದ್ದು ಬಂದರು. ಎರಡು ಅವಧಿಗೆ ಗೆದ್ದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ವಾಟಾಳ್ ಪಕ್ಷದ ವಾಟಾಳ್ ಅಧ್ಯಕ್ಷ ನಾಗರಾಜ್ ಅವರನ್ನು ಗುರುಸ್ವಾಮಿಯವರು ಸೋಲಿಸಿದ್ದು, ಆಗ ದಾಖಲೆಯಾಗಿತ್ತು. ಕ್ಷೇತ್ರದ ಮೊದಲ ಹಾಗೂ ಏಕೈಕ ಬಿಜೆಪಿ ಶಾಸಕರೆಂಬ ಹೆಗ್ಗಳಿಕೆಯೂ ಅವರದೇ ಆಗಿತ್ತು. ನಂತರ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿಲ್ಲ.

೧೯೯೯-೨೦೦೪ರ ಅವಧಿ ಮುಗಿದ ನಂತರ ನಡೆದ ರಾಜಕೀಯ ಸ್ತಿತ್ಯಂತರಗಳಲ್ಲಿ ಗುರುಸ್ವಾಮಿಯವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಬಳಿಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಬಳಿಕ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಜಿಲ್ಲೆಯ ಪ್ರಭಾವಿ ಬಿಜೆಪಿ ಮುಖಂಡರಲ್ಲೊಬ್ಬರಾಗಿ ಗುರುತಿಸಿಕೊಂಡಿದ್ದರು.

ಮೃತರ ಅಂತ್ಯಕ್ರಿಯೆ ಅವರ ಸ್ವಗ್ರಾಮ ತಾಲೂಕಿನ ಯಾನಗಹಳ್ಳಿಯ ತೋಟದಲ್ಲಿ ಕೋವಿಡ್ ಶಿಷ್ಟಾಚಾರ ದಂತೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಚಿವರು, ಶಾಸಕರಿಂದ ಸಂತಾಪ : ಮಾಜಿ ಶಾಸಕ ಸಿ.ಗುರುಸ್ವಾಮಿ ನಿಧನಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಿ.ಗುರುಸ್ವಾಮಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸಿ.ಗುರುಸ್ವಾಮಿ ಅನುಭವಿ ರಾಜಕಾರಣಿಯಾಗಿದ್ದು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಬಿಜೆಪಿ ಪಕ್ಷಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವಿಭಜಿತ ಮೈಸೂರಿನಲ್ಲಿ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರಲ್ಲದೆ, ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಜೆಪಿಯ ಪ್ರಥಮ ಶಾಸಕರು ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇವರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿರುವುದು ಅತ್ಯಂತ ದುಃಖದ ವಿಚಾರವಾಗಿದ್ದು, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಶಾಸಕರಾದ ಮುರುಗೇಶ್ ನಿರಾಣ, ಜಿ.ಟಿ.ದೇವೇಗೌಡ ಕೂಡ ಸಿ.ಗುರುಸ್ವಾಮಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss