spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಸೋಂಕು| ಐಶ್ವರ್ಯ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯಾ ಆಸ್ಪತ್ರೆಗೆ ದಾಖಲು

- Advertisement -Nitte

ಮುಂಬೈ: ಕೊರೋನಾ ಸೋಂಕಿಗೆ ತುತ್ತಾಗಿದ್ದ ಬಹುಬಾಷ ನಟಿ ಐಶ್ವರ್ಯ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯಾ ಬಚ್ಚನ್ ಕೂಡ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮಾಹಿತಿ ತಿಳಿದುಬಂದಿದೆ.

ಇತ್ತೀಚೆಗಷ್ಟೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಪ್ರಾರ್ಥಮಿಕ ಸಂಪರ್ಕದಲ್ಲಿದ್ದ ಐಶ್ವರ್ಯ ಬಚ್ಚನ್ ಹಾಗೂ ಆರಾಧ್ಯ ಬಚ್ಚನ್ ಗೂ ಕೊರೋನಾ ತಗುಲಿದ್ದು, ಮನೆಯಲ್ಲಿಯೇ ಹೋಂ ಕ್ವಾರಂಟೈನ್ ನಲ್ಲಿದ್ದರು. ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದ ಹಿನ್ನಲೆ ಶುಕ್ರವಾರ ರಾತ್ರಿ ಅವರಿಬ್ಬರನ್ನೂ ಮುಂಬೈ ನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜುಲೈ 12 ರಂದು ಟ್ವೀಟ್ ಮಾಡಿದ್ದ ಅಭಿಷೇಕ್ ಬಚ್ಚನ್, ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೊರೋನಾ ದೃಢಪಟ್ಟಿದ್ದು, ಅವರಿಬ್ಬರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.  ನನ್ನ ತಾಯಿಗೆ ಕೊರೋನಾ ಪರೀಕ್ಷಾ ವರದಿ ನೆಗಟಿವ್ ಬಂದಿದೆ. ನಾನು ಹಾಗೂ ನನ್ನ ತಂದೆ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಟ್ವೀಟ್ ಮಾಡಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss