ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕು ರೂಪಾಂತರ ಹಿನ್ನೆಲೆ ವಿಶ್ವದಲ್ಲಿ ಮತ್ತೆ ಆತಂಕ ಹೆಚ್ಚಿದೆ. ಹೊಸ ಪ್ರಭೇದದ ಸೋಂಕು ಚನ್ನೈ ಮತ್ತು ದೆಹಲಿಗೆ ಬಂದಿರುವ ಪ್ರಯಾಣಿಕರ ಪೈಕಿ ಕೆಲವರಲ್ಲಿ ಪತ್ತೆಯಾಗಿದೆ. ಹೀಗಾಗಿ ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ಹೊರಗಡೆಯಿಂದ ಯಾರೇ ಬಂದರೂ ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಹೊಸ ಪ್ರಬೇಧದ ವೈರಸ್ ಹರಡದಂತೆ ಎಚ್ಚರವಹಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಕೂಡಾ ಆತಂಕಕ್ಕೊಳಗಾಗಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಈ ವರ್ಷ ದೊಡ್ಡ ಪ್ರಮಾಣದಲ್ಲಿ ಹೊಸ ವರ್ಷ ಆಚರಣೆ ಮಾಡಲು ಬಿಡುವುದಿಲ್ಲ. ಸದ್ಯಕ್ಕೆ ನಮ್ಮ ರಾಜ್ಯದಲ್ಲಿ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಸಿಎಂ ಹೇಳಿದರು.