ಮೈಸೂರು : ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸಲು ವಿಶೇಷ ಪರೀಕ್ಷಾ ತಂಡಗಳು ಮತ್ತು ಅಧಿಕಾರಿಗಳನ್ನು ಮೈಸೂರು ನಗರ ಮತ್ತು ಜಿಲ್ಲೆಯ ಉಳಿದ ಭಾಗಗಳಿಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಪೂರ್ತಿ ಅತೃಪ್ತಿಕರವಾಗಿತ್ತು. ನಿಗಧಿತ ಗುರಿಯಲ್ಲಿ ಕೇವಲ ಶೇ ೪೫ ರಷ್ಟು ಮಾತ್ರ ಪರೀಕ್ಷೆ ನಡೆಸುವ ಮೂಲಕ ಗುರಿ ತಲುಪಲು ವಿಫಲವಾಗಿತ್ತು. ಕೋವಿಡ್ ರೋಗಿಗಳನ್ನು ಮೊದಲೇ ಗುರುತಿಸಲು ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಪರೀಕ್ಷೆಯು ನಿರ್ಣಾಯಕವಾಗಿದೆ. ಇದರಿಂದ ಕೋವಿಡ್ ಹರಡುವಿಕೆ ತಡೆಗಟ್ಟಬಹುದು.
ಈಗ ಮೈಸೂರಿನಲ್ಲಿ ಕೋವಿಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಪ್ರತಿದಿನ ಶೇ. ೧೦೦ ಕ್ಕಿಂತ ಹೆಚ್ಚು ಗುರಿಯನ್ನು ಮುಟ್ಟುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ೭ ರಂದು ಶೇ ೧೨೪ ರ ಗುರಿ ಸಾಧಿಸಲಾಗಿದೆ ಎಂದು ಹೇಳಿದ್ದಾರೆ.
ಮೈಸೂರು ನಗರವನ್ನು ಕೋವಿಡ್ ನಿರ್ವಹಣೆಗಾಗಿ ೪ ವಲಯಗಳಾಗಿ ವಿಂಗಡಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳನ್ನು ತಂಡದೊAದಿಗೆ ನೇಮಿಸಲಾಗಿದೆ. ಈ ಪರಿಣಾಮ ಇದೀಗ ಟೆಸ್ಟಿಂಗ್ ಸಂಖ್ಯೆ ಹೆಚ್ಚಳಗೊಳಿಸಲು ಸಾಧ್ಯವಾಗಿದೆ. ಅದೇ ರೀತಿ ಮುಂದಿನ ದಿನಗಳಲ್ಲೂ ಕೋವಿಡ್ ೧೯ ನಿಯಂತ್ರಣಕ್ಕಾಗಿ ಎಲ್ಲಾ ಪ್ರಯತ್ನಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗೆ, ಕೈ ನೈರ್ಮಲ್ಯ ಕಾಪಾಡಿ ಮತ್ತು ಜನಸಂದಣಿಯಿAದ ದೂರವಿರುವಂತೆ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.