Saturday, August 13, 2022

Latest Posts

ಕೊರೋನಾ ಸೋಂಕು ಹೆಚ್ಚಳ: ಮೈಸೂರು ಟ್ರಾಮಾ ಕೇರ್ ಸೆಂಟರ್‌ನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್‌ಗಳ ಅವಶ್ಯಕತೆಯೂ ಹೆಚ್ಚಾಗುತ್ತಿದೆ. ಅಲ್ಲದೆ ಸೋಂಕಿತ ಚಿಕಿತ್ಸೆಗಾಗಿ ಸುಸಜ್ಜಿತವಾದ ಕಟ್ಟಡದ ಅವಶ್ಯಕತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಇದೀಗ ಸೋಂಕಿತರಿಗೆ ಚಿಕಿತ್ಸೆ ನೀಡಲೆಂದು ಹೊಸ, ಹೊಸ ಕಟ್ಟಡಗಳನ್ನೇ ಹುಡುಕಿ, ಅದನ್ನೇ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸುತ್ತಿದೆ. ಇದೀಗ ಮೈಸೂರು ಟ್ರಾಮಾ ಕೇರ್ ಸೆಂಟರ್‌ನ್ನು ಸಂಪೂರ್ಣ ಕೋವಿಡ್ ೧೯ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುತ್ತಿದೆ.
ಕೆ.ಆರ್.ಆಸ್ಪತ್ರೆಯನ್ನು ಕೊರೋನಾ ಮುಕ್ತ ಆಸ್ಪತ್ರೆಯನ್ನಾಗಿ ಮಾಡುವ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಕೋವಿಡ್ ಆಸ್ಪತ್ರೆ ನಿರ್ಮಾಣ ಮಾಡಬೇಕಾಗಿರುವ ಹಿನ್ನಲೆಯಲ್ಲಿ ಕೆಆರ್ ಎಸ್ ರಸ್ತೆಯಲ್ಲಿರುವ ಟ್ರಾಮಾ ಕೇರ್ ಸೆಂಟರ್‌ನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುತ್ತಿದೆ.
ಟ್ರಾಮ್ ಕೇರ್ ಸೆಂಟರ್ ಕಟ್ಟಡ ೨೫೦ ಹಾಸಿಗೆ ಸಾಮರ್ಥ್ಯ ಹೊಂದಿದ್ದು, ಕೆಲವೇ ದಿನಗಳಲ್ಲಿ ಕೊರೋನಾ ಸೋಂಕೀತರ ಸೇವೆಗೆ ಕಟ್ಟಡ ಲಭ್ಯವಾಗಲಿದೆ. ಕೋವಿಡ್ ಆಸ್ಪತ್ರೆಯನ್ನಾಗಿಸುವ ಕೆಲಸ ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss